ಪ್ರಜಾಪ್ರಭುತ್ವದಲ್ಲಿ ಮತದಾನ ಪ್ರತಿ ಪ್ರಜೆಯ ಕರ್ತವ್ಯ: ಡಾ||ಯತೀಶ್ ಉಳ್ಳಾಲ್

ಪ್ರಜಾಪ್ರಭುತ್ವದಲ್ಲಿ ಮತದಾನ ಎಂಬುವುದು ಪ್ರಜೆಗಳಿಗಿರುವ ಅತ್ಯಂತ ಪ್ರಬಲವಾದ ಅಸ್ತ್ರ. ತಮ್ಮ ನಾಯಕನನ್ನು ತಾವೇ ಆಯ್ಕೆ ಮಾಡಿಕೊಳ್ಳುವ ಒಂದು ಅಪರೂಪದ ಅವಕಾಶವನ್ನು ಮತದಾನ ನೀಡುತ್ತದೆ. ಮತದಾನದ ದಿನವನ್ನು ಪ್ರಜಾಪ್ರಭುತ್ವದ ಹಬ್ಬ ಎಂದು ಕರೆಯುತ್ತಾರೆ. ಪ್ರತಿಯೊಬ್ಬನೂ ಕೂಡ ಮತದಾನದ ಗುರುತಿನ ಚೀಟಿ ಹೊಂದಿರಬೇಕು ಎಂದು ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರು ಆದ ಡಾ||ಯತೀಶ್ ಉಳ್ಳಾಲ್ ಹೇಳಿದರು.

ಇವರು ಪುತ್ತೂರಿನ ಸಂತ ಫಿಲೋಮಿನ ಪದವಿಪೂರ್ವ ಕಾಲೇಜು ಹಾಗೂ ಮಾನವಿಕ ವಿಭಾಗದ ಆಶ್ರಯದಲ್ಲಿ ನಡೆದ ‘ಮತದಾನದ ಮಹತ್ವ- ಜಾಗೃತಿ ಅಭಿಯಾನ’ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. 18 ವರ್ಷ ತುಂಬಿದ ಭಾರತದ ಪ್ರತಿಯೊಬ್ಬ ಪ್ರಜೆಯು ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ನೋಂದಾಯಿಸಿಕೊಂಡು ಪ್ರತಿ ಮತದಾನದಲ್ಲಿ ಮತದಾನ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸುವುದು ಆದ್ಯ ಕರ್ತವ್ಯವಾಗಿದೆ. ಪ್ರಪಂಚದ ಹಲವಾರು ದೇಶಗಳಲ್ಲಿ ಮತದಾನದ ಹಕ್ಕನ್ನು ಪಡೆಯಲು ಕೆಲವು ನಿಬಂಧನೆಗಳಿದ್ಧು, ಭಾರತವು ಈ ಪಟ್ಟಿಯಲ್ಲಿ ಅತ್ಯಂತ ವಿಶಿಷ್ಟವಾದ ಸ್ಥಾನದಲ್ಲಿ ಗುರುತಿಸಿಕೊಂಡಿದೆ. ಅದೇ ರೀತಿ ತಾವೆಲ್ಲರೂ ಮತದಾರರ ಪಟ್ಟಿಗೆ ಹೆಸರು ನೊಂದಾಯಿಸುವುದರ ಜೊತೆಗೆ e-eಠಿiಛಿ ಕಾರ್ಡ್ ಗಳ ಉಪಯೋಗವನ್ನು ಕೂಡ ಪಡೆಯಬೇಕೆಂದು ವಿನಂತಿಸಿಕೊಳ್ಳುತ್ತೇವೆ. ಪ್ರತಿ ಚುನಾವಣೆಯಲ್ಲಿಯೂ ಮತ ಚಲಾಯಿಸುವುದರ ಮೂಲಕ ಪ್ರಜಾಪ್ರಭುತ್ವದ ಗೆಲುವಿನಲ್ಲಿ ಯುವಜನತೆ ಪ್ರಮುಖ ಪಾತ್ರವನ್ನು ವಹಿಸಬೇಕೆಂದು ಕೇಳಿಕೊಳ್ಳುತ್ತೇವೆ ಎಂದು ಹೇಳಿದರು.

ಪುತ್ತೂರಿನ ಪ್ರೊಬೆಷನರಿ ತಹಸಿಲ್ದಾರ್ ಶ್ರೀಮತಿ ಮೋನಾ ರೋತ್ e- ಇಠಿiಛಿ ನ ನೋಂದಣಿಯ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಪುತ್ತೂರಿನ ಕಂದಾಯ ನಿರೀಕ್ಷಕ ಎಸ್ .ಮಹೇಶ್ ಉಪಸ್ಥಿತರಿದ್ದರು. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಭರತ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಅತಿಥಿಗಳನ್ನು ಸ್ವಾಗತಿಸಿ ವಂದಿಸಿದರು.

×
Social Media Auto Publish Powered By : XYZScripts.com