ಪುತ್ತೂರು: ಇಲ್ಲಿಯ ಸಂತ ಫಿಲೋಮಿನಾ ಕಾಲೇಜಿನ ಕನ್ನಡ ಸಂಘ ಮತ್ತು ಜೆಸಿಐ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ ದಿನಾಂಕ 25-07-2014 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಜೆಸಿಐ ಪುತ್ತೂರು ಘಟಕದ ಸದಸ್ಯ ಮತ್ತು ರಾಷ್ಟ್ರೀಯ ತರಬೇತುದಾರರಾದ ಜೆ.ಸಿ| ರಾಜೇಶ್ ಬೆಜ್ಜಂಗಳ ಮಾತನಾಡಿ, ದೇಶದ ಭವಿಷ್ಯವು ಯುವಶಕ್ತಿಯನ್ನು ಅವಲಂಬಿಸಿದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಜನಾಂಗವು ಅತ್ಯಾಧುನಿಕ ಕೌಶಲ್ಯ ಮತ್ತು ಜ್ಞಾನವನ್ನು ಹೊಂದಿರಬೇಕು ಹಾಗೂ ತನ್ನಲ್ಲಿರುವ ದೌರ್ಬಲ್ಯವನ್ನು ಅರಿತುಕೊಂಡು, ಶಕ್ತಿ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ತರಬೇತುದಾರರಾದ ಜೆಸಿ| ಅಶ್ವಿನಿ ಕೃಷ್ಣ ಮತ್ತು ಜೆಸಿ| ಕೃಷ್ಣಪ್ರಸಾದ್ ’ಗುರಿ ನಿರ್ಧರಿಸುವುದು’ ಮತ್ತು ’ಚೌಕಟ್ಟಿನಿಂದ ಹೊರ ಬನ್ನಿ’ ಎಂಬ ವಿಷಯದ ಕುರಿತು ತರಬೇತಿಯನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಉಪಪ್ರಾಚಾರ್ಯರಾದ ಪ್ರೊ.ವಿಷ್ಣು ಭಟ್ ವಹಿಸಿದ್ದರು. ವೇದಿಕೆಯಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ| ವಿಜಯ ಕುಮಾರ ಮೊಳೆಯಾರ್ ಉಪಸ್ಥಿತರಿದ್ದರು. ಶ್ರೀ ರೋಶಿತ್ ಸ್ವಾಗತಿಸಿದರು. ಕು. ವರ್ಷ ಮೊಳೆಯಾರ್ ಪ್ರಾರ್ಥನೆಯನ್ನು ಹಾಡಿದರು. ಕು. ಶ್ವೇತಲತ ವಂದಿಸಿದರು. ಕು. ಶೋಭಿತಾ ಕಾರ್ಯಕ್ರಮ ನಿರೂಪಿಸಿದರು.